ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಬೇಡ: ಖುರ್ಷೀದ್

ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಕೇಂದ್ರ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷೀದ್ ಹೇಳಿದ್ದಾರೆ.

Srinivasa Murthy VN
Updated On : 16 Feb 2013, 3:59 am

ಢಾಕಾ: ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಕೇಂದ್ರ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷೀದ್ ಹೇಳಿದ್ದಾರೆ.

ಇಂದು 2 ದಿನಗಳ ಪ್ರವಾಸ ನಿಮಿತ್ತ ಬಾಂಗ್ಲಾದೇಶಕ್ಕೆ ಆಗಮಿಸಿರುವ ಸಚಿವ ಖುರ್ಷೀದ್ ಅವರು, ಢಾಕಾ ವಿಮಾನ ನಿಲ್ದಾಣದಲ್ಲಿ ಹಗರಣ ಕುರಿತಂತೆ ಮಾತನಾಡಿದರು. ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ರಾಜಕೀಯ ಮಾಡುವುದು ಬೇಡ. ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿಯೇ ಹಗರಣದ ತನಿಖೆ ನಡೆಸುವಂತೆ ಸಿಬಿಐಗೆ ವಹಿಸಲಾಗಿದೆ. ಆದರೆ ಪ್ರತಿಪಕ್ಷಗಳು ಈ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸುತ್ತಿವೆ. ಸಿಬಿಐ, ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಲಿದೆ ಎಂದು ಅವರು ತಿಳಿಸಿದರು.

'ಇದು ದೇಶದ ಹಿತಾಸಕ್ತಿಯ ವಿಷಯ. ಕಾಪ್ಟರ್ ಖರೀದಿ ಒಪ್ಪಂದ ಕುರಿತಂತೆ ಕೇಂದ್ರದ ಯುಪಿಎ ಸರ್ಕಾರ ಎಲ್ಲ ನೀತಿ ನಿಯಮಗಳನ್ನು ಕಾನೂನಿನ ಅನ್ವಯ ಪಾಲಿಸಿದೆ ಈ ಬಗ್ಗೆ ಅನುಮಾನ ಬೇಡ ಎಂದು ಖುರ್ಷೀದ್ ಹೇಳಿದರು.

ವಿವಾದಕ್ಕೆ ತುತ್ತಾಗಿರುವ ಈ ಕಾಪ್ಟರ್ ಖರೀದಿ ಒಪ್ಪಂದವನ್ನು ಸರ್ಕಾರ ರದ್ದು ಪಡಿಸುತ್ತದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖುರ್ಷೀದ್, 'ಪ್ರಕರಣ ಕುರಿತಂತೆ ಅಗಸ್ಟಾ ವೆಸ್ಟ್‌ಲ್ಯಾಂಡ್ ಸಂಸ್ಥೆಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅದರಿಂದ ಪ್ರತ್ಯುತ್ತರ ಬಂದ ಬಳಿಕ ನಾವು ಯಾವುದೇ ತೀರ್ಮಾನ ಕೈಗೊಳ್ಳಬಹುದು. ಯಾವುದೇ ಒಪ್ಪಂದವನ್ನು ರದ್ದುಪಡಿಸುವ ಮೊದಲು ನಾವು ಕೆಲವೊಂದು ಕಾನೂನು ನಿಯಮಗಳನ್ನು ಪಾಲಿಸಬೇಕಿದೆ ಎಂದು ಅವರು ತಿಳಿಸಿದರು.

ಒಟ್ಟಾರೆ ಇಟಲಿ ಮೂಲದ ವೈಮಾನಿಕ ಸಂಸ್ಥೆಯೊಂದಿಗೆ ಮಾಡಿಕೊಂಡಿದ್ದ ಕಾಪ್ಟರ್ ಖರೀದಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಬಹುತೇಕ ಎಳ್ಳು ನೀರು ಬಿಟ್ಟಿದೆ. ಉಳಿದಂತೆ ಈ ಒಪ್ಪಂದದಲ್ಲಿ ಭಾಗಿಯಾದ ಮಧ್ಯವರ್ತಿಗಳು ಮತ್ತು ಹಣಪಡೆದ ಭ್ರಷ್ಟರ ಕುರಿತ ಮಾಹಿತಿ ಲಭ್ಯವಾಗಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement