ಜೆಡಿಎಸ್ ಶಾಸಕ ಪುಟ್ಟೇಗೌಡ ರಾಜಿನಾಮೆ
ಚನ್ನರಾಯಪಟ್ಟಣ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟೇಗೌಡ ಅವರು ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮಡಿಕೇರಿ: ಚನ್ನರಾಯಪಟ್ಟಣ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟೇಗೌಡ ಅವರು ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಪುಟ್ಟೇಗೌಡ ಅವರು ಇಂದು ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ಸ್ಪಿಕರ್ ಕೆ.ಜೆ.ಬೋಪಯ್ಯ ಅವರ ನಿವಾಸಕ್ಕೆ ತೆರಳಿ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಬೋಪಯ್ಯ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪುಟ್ಟೇಗೌಡ, ಜೆಡಿಎಸ್ನಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಹೀಗಾಗಿ ತಾವು ಪಕ್ಷ ತೊರೆಯುತ್ತಿರುವುದಾಗಿ ತಿಳಿಸಿದರು.
ಇದೇ ವೇಳೆ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಪ್ರತಿಕ್ರಿ.ಯಿಸಿದ ಅವರು, ಪ್ರಾದೇಶಿಕ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತಿದ್ದೇನೆ ಎಂದು ಹೇಳಿದರು.