ನಟ ದರ್ಶನ್ ದೋಷಮುಕ್ತ
2011 ಸೆಪ್ಟಂಬರ್ ನಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ...
ಬೆಂಗಳೂರು: 2011 ಸೆಪ್ಟಂಬರ್ ನಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ.
ಪ್ರಸ್ತುತ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯಾಲಯ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಸೋಮವಾರ ದರ್ಶನ್ ರನ್ನು ದೋಷಮುಕ್ತಗೊಳಿಸಿದೆ.
2011ರಲ್ಲಿ ತನ್ನ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ದೂರಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದಳು.
ಈ ಪ್ರಕರಣದಲ್ಲಿ ದರ್ಶನ್ ಜೈಲು ಶಿಕ್ಷೆ ಅನುಭವಿಸಿದ್ದು, ತದನಂತರ ವಿಜಯಲಕ್ಷ್ಮಿ ದರ್ಶನ್ ಜತೆ ರಾಜಿ ಸಂಧಾನ ಮಾಡುವ ಮೂಲಕ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದರು.