ಲೈಂಗಿಕ ದೌರ್ಜನ್ಯ ತಡೆ ಮಸೂದೆ ಶೀಘ್ರ ಜಾರಿ: ಪ್ರಧಾನಿ
ಕಚೇರಿಯಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಕ್ಕೆ ಕಡಿವಾಣ ಹಾಕಲಿರುವ ಮಸೂದೆ...
ನವದೆಹಲಿ: ಕಚೇರಿಯಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಕ್ಕೆ ಕಡಿವಾಣ ಹಾಕಲಿರುವ ಮಸೂದೆಯನ್ನು ಶೀಘ್ರವೇ ಸಂಸತ್‌ನಲ್ಲಿ ಜಾರಿ ಮಾಡಲಾಗುವುದು ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಕಠಿಣವಾದ ಕಾನೂನು ಕ್ರಮವನ್ನು ಕೈಗೊಳ್ಳುವುದಕ್ಕಾಗಿ ಪ್ರಸ್ತುತ ಮಸೂದೆಯನ್ನು ಆದಷ್ಟು ಬೇಗನೆ ಜಾರಿ ಮಾಡಬೇಕೆಂಬುದು ನಮ್ಮ ಅಭಿಲಾಷೆ.
ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳು ಜಾಸ್ತಿಯಾಗುತ್ತಿದ್ದು, ಅದನ್ನು ತಡೆಗಟ್ಟಲು ನಾವು ಬದ್ಧರಾಗಿದ್ದೇವೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.
ಕಚೇರಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮಸೂದೆ 2012 ಲೋಕಸಭೆಯಲ್ಲಿ ಜಾರಿಯಾಗಿದ್ದು, ಇದಕ್ಕೆ ರಾಜ್ಯಸಭೆಯಲ್ಲಿ ಒಪ್ಪಿಗೆ ಲಭಿಸಲು ಬಾಕಿ ಇದೆ.