ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಳೆ ಮುಷ್ಕರ: ಶಾಲೆಗಳಿಗೆ ರಜೆ ಇಲ್ಲ, ಬಸ್ ಸಂಚಾರ ಇರುತ್ತೆ

ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ನಾಳಿನ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಇಲ್ಲ ..

Lingaraj Badiger
Updated On : 19 Feb 2013, 12:42 pm

ಬೆಂಗಳೂರು: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ನಾಳಿನ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಸ್.ಆರ್. ಉಮಾಶಂಕರ್ ಅವರು ಮಂಗಳವಾರ ಹೇಳಿದ್ದಾರೆ.

ಮುಷ್ಕರದ ಹಿನ್ನೆಲೆಯಲ್ಲಿ ಫೆಬ್ರವರಿ 20 ಹಾಗೂ 21ರಂದು ಯಾವುದೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿಲ್ಲ. ಆದರೆ ಪರಿಸ್ಥಿತಿಗೆ ಅನುಗುಣವಾಗಿ ಆಯಾ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಉಮಾಶಂಕರ್ ಸ್ಪಷ್ಟಪಡಿಸಿದ್ದಾರೆ.

ಇನ್ನು ನಾಳೆಯೂ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಸಾರಿಗೆ ಹಾಗೂ ಗೃಹ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ತಿಳಿಸಿದ್ದಾರೆ.

ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
ಬಂದ್ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಫೆಬ್ರವರಿ 22ಕ್ಕೆ ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ.ತಿಮ್ಮೇಗೌಡ ಅವರು ಹೇಳಿದ್ದಾರೆ.

ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ಸರ್ಕಾರದ ವೈಫಲ್ಯ ಹಾಗೂ ಕಾರ್ಮಿಕ ಕಾಯ್ದೆಯ ಉಲ್ಲಂಘನೆಗೆ ಸಂಬಂಧಿಸಿ 11 ಕೇಂದ್ರ ಕಾರ್ಮಿಕ ಸಂಘಟನೆಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement