ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಜೆಟ್ ಅಧಿವೇಶನದಲ್ಲಿ ಶಿಂದೆ ವಿರುದ್ಧ ತರಾಟೆಗೆ ಬಿಜೆಪಿ ಸಜ್ಜು

ಬಿಜೆಪಿ ಕೇಸರಿ ಭಯೋತ್ಪಾದನೆ ಮಾಡುತ್ತಿದೆ ಎಂದು ಆರೋಪ ಮಾಡಿದ್ದ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ...

Rashmi Kasaragodu
Updated On : 19 Feb 2013, 2:19 am

ನವದೆಹಲಿ: ಬಿಜೆಪಿ ಕೇಸರಿ ಭಯೋತ್ಪಾದನೆ ಮಾಡುತ್ತಿದೆ ಎಂದು ಆರೋಪ ಮಾಡಿದ್ದ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಅವರನ್ನು ಬಜೆಟ್ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ.

ಅದೇ ವೇಳೆ ಹೆಲಿಕಾಪ್ಟರ್ ಹಗರಣದ ಬಗ್ಗೆಯೂ ಬಿಜೆಪಿ ಅಧಿವೇಶನದಲ್ಲಿ ಪ್ರಶ್ನಿಸಲಿದೆ.

ಕೆಲವು ದಿನಗಳ ಹಿಂದೆ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘಗಳು ಕೇಸರಿ ಭಯೋತ್ಪಾದನೆ ಮಾಡುತ್ತಿವೆ ಎಂದು ಶಿಂದೆ ಆರೋಪಿಸಿದ್ದರು.

ಆದಾಗ್ಯೂ, ಗುರುವಾರ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಯಾವ ನಡೆ ಕೈಗೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಅಡ್ವಾಣಿಯವರ ನಿವಾಸದಲ್ಲಿ ಬಿಜೆಪಿ ಸಭೆ ನಡೆಸಿದೆ.

ಪ್ರಸ್ತುತ ಸಭೆಯಲ್ಲಿ ಶಿಂದೆ ಹೇಳಿಕೆಯ ವಿರುದ್ಧ ಬಜೆಟ್ ಅಧಿವೇಶನದಲ್ಲಿ ಪ್ರಶ್ನಿಸಬೇಕೆಂದು ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ.

ನಾವು ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುತ್ತೇನೆ. ಶಿಂದೆ ಅವರು ಲೋಕಸಭಾ ನಾಯಕರು, ಅವರು ನಮ್ಮನ್ನು ಉಗ್ರರೆಂದು ಹೇಳುತ್ತಿದ್ದಾರೆಯೇ? ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಪ್ರಶ್ನಿಸಿದ್ದಾರೆ.

ಏತನ್ಮಧ್ಯೆ, ತಮ್ಮ ಹೇಳಿಕೆಯ ಬಗ್ಗೆ ಶಿಂದೆ ಕ್ಷಮೆ ಕೇಳಬೇಕು ಎಂಬುದೇ ನಮ್ಮ ಬೇಡಿಕೆ ಎಂದು ಮಾಧ್ಯಮದವರಲ್ಲಿ ಮಾತನಾಡಿದ ರವಿಶಂಕರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement