ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುಷ್ಕರ ಹಿಂಪಡೆಯಲು ಖರ್ಗೆ ಮನವಿ

ಫೆಬ್ರವರಿ 20 ಹಾಗೂ 21ರ ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂಪಡೆಯುವಂತೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ..

Lingaraj Badiger
Updated On : 19 Feb 2013, 4:14 am

ನವದೆಹಲಿ: ಫೆಬ್ರವರಿ 20 ಹಾಗೂ 21ರ ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂಪಡೆಯುವಂತೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಮಿಕ ಮುಖಂಡರಲ್ಲಿ ಮಂಗಳವಾರ ಮನವಿ ಮಾಡಿದ್ದಾರೆ.

ದೇಶದ ಹಿತದೃಷ್ಟಿಯಿಂದ ಮುಷ್ಕರ ಹಿಂಪಡೆಯಿರಿ, ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿರುವುದು ಸರಿಯಲ್ಲ. ಮುಷ್ಕರದಿಂದ ದೇಶದ ಆರ್ಥಿಕತೆ ಕುಂಠಿತವಾಗುತ್ತದೆ ಎಂದು ಖರ್ಗೆ ಹೇಳಿದ್ದಾರೆ.

ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲಾಗುವುದು. ಈ ಬಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚಿಸಿದ್ದೇವೆ ಎಂದು ಖರ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿನ್ನೆ ಮುಷ್ಕರ ಕೈ ಬಿಟ್ಟು ಮಾತುಕತೆ ಬನ್ನಿ ಎಂದು ಸ್ವತಃ ಪ್ರಧಾನಿ ಸಿಂಗ್ ಅವರೇ ಕರೆ ನೀಡಿದ್ದರು. ಆದರೆ ಕಾರ್ಮಿಕ ಸಂಘಟನೆಗಳು ಮಾತ್ರ ಖರ್ಗೆ ಹಾಗೂ ಪ್ರಧಾನಿ ಅವರ ಮನವಿಯನ್ನು ತಿರಸ್ಕರಿಸಿದ್ದು, ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಸಿದ್ಧತೆ ನಡೆಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement