ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ತೊರೆಯುವ ಬಗ್ಗೆ ಶೀಘ್ರವೇ ನಿರ್ಧಾರ: ಯೋಗೇಶ್ವರ್

ಬಿಜೆಪಿ ತೊರೆಯುವ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವುದಾಗಿ ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ..

Lingaraj Badiger
Updated On : 20 Feb 2013, 3:39 am

ರಾಮನಗರ: ಬಿಜೆಪಿ ತೊರೆಯುವ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವುದಾಗಿ ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬುಧವಾರ ಹೇಳಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತೊರೆಯುವ ಬಗ್ಗೆ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ, ಇಂದು ಸಂಜೆ ಅಥವಾ ನಾಳೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಬಿಜೆಪಿ ಮೂರು ಭಾಗವಾಗಿ ಹೋಗಿದೆ. ಈಗ ಪಕ್ಷಾಂತರ ಸರ್ವೇಸಾಮಾನ್ಯವಾಗಿದೆ. ಕ್ಷೇತ್ರದ ಜನತೆಯ ಆಶಯದಂತೆ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ಈ ಸಂಬಂಧ ತಾವು ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಿರುವುದಾಗಿ ಯೋಗೇಶ್ವರ್ ಹೇಳಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಯೋಗೇಶ್ವರ್ ಇದೀಗ ಮತ್ತೆ ಮಾತೃ ಪಕ್ಷಕ್ಕೆ ಮರಳಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement