ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಇಶ್ರಾತ್ ಎನ್‌ಕೌಂಟರ್ ಪ್ರಕರಣ: ಐಪಿಎಸ್ ಅಧಿಕಾರಿ ಬಂಧನ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ 2004ರಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದಲ್ಲಿ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಐಪಿಎಸ್ ಅಧಿಕಾರಿ ಜಿ.ಎಲ್.ಸಿಂಘಾಲ್ ...

Parashurama
Updated On : 21 Feb 2013, 3:26 am

ಅಹಮದಾಬಾದ್: ಅಚ್ಚರಿಯ ಬೆಳವಣಿಗೆಯೊಂದರಲ್ಲಿ 2004ರಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದಲ್ಲಿ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಐಪಿಎಸ್ ಅಧಿಕಾರಿ ಜಿ.ಎಲ್.ಸಿಂಘಾಲ್ ಅವರನ್ನು ಕೇಂದ್ರ ತನಿಖಾ ಸಂಸ್ಥೆ(ಸಿಬಿಐ)ಯ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಮುಂಬೈ ಮೂಲದ ಯುವತಿ ಇಶ್ರಾತ್ ಜಹಾನ್(19), ಪ್ರಾಣೇಶ್ ಪಿಲೈ, ಜಿಶನ್ ಜೋಹಾರ್, ಅಮ್ಜದ್ ಅಲಿ ರಾಣಾ ಎಂಬುವರನ್ನು ಅಹಮದಾಬಾದ್ ಮತ್ತು ಗಾಂಧಿನಗರದ ಮಧ್ಯೆ ಜೂನ್ 15, 2004ರಲ್ಲಿ ಅಹಮದಾಬಾದ್ ನಗರ ಅಪರಾಧ ದಳ ಎನ್‌ಕೌಂಟರ್ ಮಾಡಿತ್ತು. ಈ ಎನ್‌ಕೌಂಟರ್ ನಡೆದ ಸಂದರ್ಭದಲ್ಲಿ ಸಿಂಘಾಲ್ ಅಹಮದಾಬಾದ್ ನಗರದ ಸಹಾಯಕ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಪ್ರಕರಣದ ವಿಚಾರಣೆ ಗುಜರಾತ್ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಹಿಂದೆ ಪ್ರಕರಣದ ವಿಚಾರಣೆ ಆಲಿಸಿದ ನ್ಯಾಯಾಲಯ, ಪ್ರಕರಣ ಸಂಬಂಧ ಮಾರ್ಚ್ 15ರೊಳಗೆ ನ್ಯಾಯಾಲಯಕ್ಕೆ ವರದಿ ನೀಡುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement