ಸರಣಿ ಸ್ಫೋಟ: ರಾಜ್ಯದಲ್ಲಿಯೂ ತೀವ್ರ ಕಟ್ಟೆಚ್ಚರ, ಬಸ್, ಸಂಪರ್ಕ ರದ್ದು
ಹೈದರಾಬಾದಿನಲ್ಲಿ ಸಂಭವಿಸಿರುವ ಸರಣಿ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯಸರ್ಕಾರ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರಕ್ಕೆ ಆದೇಶಿಸಿದೆ.
ಬೆಂಗಳೂರು: ಹೈದರಾಬಾದಿನಲ್ಲಿ ಸಂಭವಿಸಿರುವ ಸರಣಿ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯಸರ್ಕಾರ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರಕ್ಕೆ ಆದೇಶಿಸಿದೆ.
ರಾಜ್ಯದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಗೃಹ ಇಲಾಖೆ ಪೊಲೀಸರಿಗೆ ತಿಳಿಸಿದೆ. ಅಲ್ಲದೆ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ನಗರದ ಪ್ರಮುಖ ಪ್ರದೇಶಗಳಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.
ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಹೆದ್ದಾರಿಗಳಲ್ಲಿ ಒದಗಿಸಲಾಗಿರುವ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಬೆಂಗಳೂರಿನಿಂದ ಹೈದರಾಬಾದಿಗಿ ತೆರಳುವ ಎಲ್ಲ ಸರ್ಕಾರಿ ಮತ್ತು ಖಾಸಗಿ ಬಸ್ಗಳ ಪ್ರಯಾಣವನ್ನು ರದ್ದುಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.