ಹೈದರಾಬಾದ್‌ನತ್ತ ರಾಷ್ಟ್ರೀಯ ಭದ್ರತಾ ಪಡೆಗಳ ದೌಡು
ಹೈದರಾಬಾದಿನಲ್ಲಿ ಸರಣಿ ಸ್ಫೋಟ ಸಂಭವಿಸುತ್ತಿದ್ದಂತೆಯೇ ರಾಷ್ಟ್ರೀಯ ಭದ್ರತಾ ಪಡೆಗಳು ಘಟನಾ ಸ್ಥಳಕ್ಕೆ ದೌಡಾಯಿಸುತ್ತಿವೆ.
ಹೈದರಾಬಾದ್: ಹೈದರಾಬಾದಿನಲ್ಲಿ ಸರಣಿ ಸ್ಫೋಟ ಸಂಭವಿಸುತ್ತಿದ್ದಂತೆಯೇ ರಾಷ್ಟ್ರೀಯ ಭದ್ರತಾ ಪಡೆಗಳು ಘಟನಾ ಸ್ಥಳಕ್ಕೆ ದೌಡಾಯಿಸುತ್ತಿವೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ರಾಷ್ಚ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮತ್ತು ಮಹಾರಾಷ್ಟ್ರಾದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಸಿಬ್ಬಂದಿಗಳು ದೌಡಾಯಿಸುತ್ತಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಭದ್ರತಾ ಪಡೆಗಳು ಹೈದರಾಬಾದಿಗೆ ಪ್ರಯಾಣ ಬೆಳೆಸಿವೆ. ಇನ್ನು ಕೆಲವೇ ಗಂಟೆಗಳಲ್ಲಿ ಹೈದರಾಬಾದಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಹೈದರಾಬಾದಿನ ದಿಲ್‌ಸುಖ್ ನಗರದಲ್ಲಿ ಸಂಭವಿಸಿದ ಸರಣಿ ಸ್ಪೋಟದಲ್ಲಿ ಒಟ್ಟು 22 ಮಂದಿ ಸಾವಿಗೀಡಾಗಿದ್ದು, 55 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.