ಇಬ್ಬರು ಸಂಸದರ ವಿರುದ್ಧ ಹೈಕಮಾಂಡ್‌ಗೆ ದೂರು
ಸಂಸದ ಬಿ. ವೈ ರಾಘವೇಂದ್ರ, ಶಿವಕುಮಾರ್ ಉದಾಸಿ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ...
ಬೆಂಗಳೂರು: ಸಂಸದ ಬಿ. ವೈ ರಾಘವೇಂದ್ರ, ಶಿವಕುಮಾರ್ ಉದಾಸಿ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಆರೋಪಿಸಿದ್ದಾರೆ.
ಈ ಇಬ್ಬರು ಸಂಸದರು ಬಿಜೆಪಿಯಲ್ಲಿದ್ದುಕೊಂಡು ಕೆಜೆಪಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್ ಗೆ ಪತ್ರ ಬರೆದಿದ್ದಾರೆ.
ಸಂಸದ ಬಿ. ವೈ ರಾಘವೇಂದ್ರ, ಶಿವಕುಮಾರ್ ಉದಾಸಿ ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ಕೆಜೆಪಿ ಸಂಘಟನೆಯಲ್ಲಿ ತೊಡಗಿದ್ದಾರೆ ಹಾಗು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಕೆಜೆಪಿ ಅಭ್ಯರ್ಥಿಗಳಿಗೆ ಸಹಕಾರ ನೀಡುತ್ತಿದ್ದಾರೆ ಎಂಬುದು ಈಶ್ವರಪ್ಪ ಅವರ ಆರೋಪವಾಗಿದೆ.
ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಿಗೆ ಪತ್ರ ಬರೆದಿರುವ ಈಶ್ವರಪ್ಪ ಪಕ್ಷ ವಿರೋಧಿ ಸಂಘಟನೆಯಲ್ಲಿ ತೊಡಗಿರುವ ಈ ಸಂಸದರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿದ್ದಾರೆ.