ನಖ್ವಿಗೆ ಜೀವ ಬೆದರಿಕೆ
ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ನಂತರ ನನಗೆ ಜೀವ ಬೆದರಿಕೆ ಬಂದಿದೆ ಎಂದು ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ...
ನವದೆಹಲಿ: ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ನಂತರ ನನಗೆ ಜೀವ ಬೆದರಿಕೆ ಬಂದಿದೆ ಎಂದು ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವೀ ಶುಕ್ರವಾರ ಹೇಳಿದ್ದಾರೆ.
ಸಂಸತ್ ಭವನದ ಮೇಲೆ ದಾಳಿ ಮಾಡಿದ್ದ ಅಫ್ಜಲ್ನ್ನು ಗಲ್ಲಿಗೇರಿಸಿದ ನಂತರ ನನಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ನನಗೆ ರಕ್ಷಣೆ ನೀಡಬೇಕೆಂದು ನಖ್ವಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಡಿಸೆಂಬರ್ 13, 2001ರಂದು ಸಂಸತ್ ಮೇಲೆ ದಾಳಿ ಮಾಡಿದ್ದ ಅಫ್ಜಲ್ ಗುರುವನ್ನು ಗಲ್ಲಿಗೇರಿಸಬೇಕೆಂಬುದು ಬಿಜೆಪಿಯ ಒತ್ತಾಯವಾಗಿತ್ತು.
ಆತನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಳ್ಳಿ ಹಾಕಿದ ನಂತರ ಅಫ್ಜಲ್ನ್ನು ಗಲ್ಲಿಗೇರಿಸಲಾಗಿತ್ತು.