ಜೆಪಿಸಿ ಮುಂದೆ ಹಾಜರಾಗಲು ನಾನು ಸಿದ್ಧ: ಎ. ರಾಜಾ
2 ಜಿ ಹಗರಣಕ್ಕೆ ಸಂಬಂಧಪಟ್ಟಂತೆ ಜಂಟಿ ಸಂಸದೀಯ ಸಮಿತಿಯ ಮುಂದೆ ಹಾಜರಾಗಲು ನಾನು ಸಿದ್ಧ ಎಂದು ...
ನವದೆಹಲಿ: 2 ಜಿ ಹಗರಣಕ್ಕೆ ಸಂಬಂಧಪಟ್ಟಂತೆ ಜಂಟಿ ಸಂಸದೀಯ ಸಮಿತಿಯ ಮುಂದೆ ಹಾಜರಾಗಲು ನಾನು ಸಿದ್ಧ ಎಂದು ಮಾಜಿ ಟೆಲಿಕಾಂ ಸಚಿವ ಎ. ರಾಜಾ ಹೇಳಿದ್ದಾರೆ.
ಈ ಬಗ್ಗೆ ಅವರು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಸ್ತುತ ಪತ್ರದಲ್ಲಿ ರಾಜಾ ಅವರು, ತಾನು ಜಂಟಿ ಸಂಸದೀಯ ಸಮಿತಿಯ ಮುಂದೆ ಹಾಜರಾಗಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಪ್ರಕರಣದಲ್ಲಿ ಸತ್ಯವನ್ನು ಮರೆಮಾಚಲಾಗುತ್ತಿದೆ ಎಂದು ಹೇಳಿದ ರಾಜಾ ತಾನು ಉಚ್ಚ ನ್ಯಾಯಾಲಯವನ್ನು ಗೌರವಿಸುತ್ತೇನೆ ಎಂದಿದ್ದಾರೆ.
ಮೇ 15, 2012ರಲ್ಲಿ ನಡೆದ 2ಜಿ ಸ್ಪೆಕ್ಟ್ರಂ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜಾ ಫೆ.2011ರಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.