ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಯೋಗೇಶ್ವರ್ ರಾಜಿನಾಮೆ ಅಂಗೀಕಾರ

ಎರಡು ದಿನಗಳ ಹಿಂದಷ್ಟೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ, ಬಳಿಕ ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಿದ್ದ ಸಿ.ಪಿ.ಯೋಗೇಶ್ವರ್...

Lingaraj Badiger
Updated On : 23 Feb 2013, 1:52 am

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ, ಬಳಿಕ ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಿದ್ದ ಸಿ.ಪಿ.ಯೋಗೇಶ್ವರ್ ಅವರ ರಾಜಿನಾಮೆಯನ್ನು ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಶನಿವಾರ ಅಂಗೀಕರಿಸಿದ್ದಾರೆ.

ಯೋಗೇಶ್ವರ್ ರಾಜಿನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಕಚೇರಿ ಇಂದು ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ಸೇರುಲು ನಿರ್ಧರಿಸಿದ್ದ ಅರಣ್ಯ ಸಚಿವರಾಗಿದ್ದ ಯೋಗೇಶ್ವರ್ ಹಾಗೂ ಸಣ್ಣ ಕೈಗಾರಿಕಾ ಸಚಿವ ರಾಜುಗೌಡ ಅವರು ಕಳೆದ ಗುರುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಇಬ್ಬರ ರಾಜಿನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.

ಯೇಗೇಶ್ವರ್ ಹಾಗೂ ರಾಜುಗೌಡ ಇಬ್ಬರು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ರಾಜಿನಾಮೆ ಪತ್ರ ನೀಡಿದ್ದರು. ನಂತರ ನಿನ್ನೆ .ೋಗೇಶ್ವರ್ ಅವರು ಮಡಿಕೇರಿಗೆ ತೆರಳಿ ಸ್ಪೀಕರ್ ಬೋಪಯ್ಯ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಿದ್ದರು.

ಆದರೆ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದ  ರಾಜೂಗೌಡ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿದ್ದು, ಕಾಂಗ್ರೆಸ್‌ನಿಂದ ಇನ್ನೂ ಟಿಕೆಟ್ ಖಚಿತವಾಗದ್ದರಿಂದ ಶಾಸಕ ಸ್ಥಾನಕ್ಕೆ ಶುಕ್ರವಾರ ನೀಡಬೇಕಿದ್ದ ರಾಜಿನಾಮೆನಿರ್ಧಾರ ಮುಂದೂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement