ಹೈ ಸ್ಫೋಟ: ಎನ್‌ಐಎಗೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಸಲ್ಲಿಕೆ
ಹೈದರಾಬಾದ್‌ನ ಅವಳಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ವಿಧಿವಿಜ್ಞಾನ ಪ್ರಯೋಗಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆ..
ಹೈದರಾಬಾದ್: ಹೈದರಾಬಾದ್‌ನ ಅವಳಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ವಿಧಿವಿಜ್ಞಾನ ಪ್ರಯೋಗಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಶನಿವಾರ ಪ್ರಾಥಮಿಕ ವರದಿ ಸಲ್ಲಿಸಿದೆ.
ಎನ್‌ಐಎಗೆ ಸಲ್ಲಿಸಲಾಗಿರುವ ಪ್ರಾಥಮಿಕ ವರದಿಯ ಪ್ರಕಾರ, ದುಷ್ಕರ್ಮಿಗಳು ಸ್ಫೋಟಕ್ಕೆ ಊಟದ ಬಾಕ್ಸ್‌ನ್ನು ಬಳಸಲಾಗಿದ್ದು, 30 ಮೀಟರ್ ವ್ಯಾಪ್ತಿಯಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.
ಬಾಂಬ್‌ಗಳನ್ನು ಸ್ಥಳೀಯವಾಗಿ ತಯಾರಿಸಿರುವ ಸಾಧ್ಯತೆ ಇದ್ದು, ಈ ಬಾಂಬ್‌ಗೆ ಸುಮಾರು 900 ಗ್ರಾಂ ಅಮೋನಿಯಂ ನೈಟ್ರೇಟ್ ಬಳಕೆ ಮಾಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿ ಬುಧವಾರ ಸಂಜೆ ಅವಳಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ 16 ಜನ ಮೃತಪಟ್ಟಿದ್ದರು ಮತ್ತು 119 ಜನ ತೀವ್ರವಾಗಿ ಗಾಯಗೊಂಡಿದ್ದರು.