ಕಾಂಗ್ರೆಸ್ ಅಧ್ಯಕ್ಷೆ ಅಥವಾ ಉಪಾಧ್ಯಕ್ಷರೇ ಮುಂದಿನ ಪ್ರಧಾನಿ ಅಭ್ಯರ್ಥಿ: ತರೂರ್
ಭೋಪಾಲ್: 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಶಶಿ ತರೂರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇಯಾದರೆ, ಸಹಜವಾಗಿಯೇ ಪಕ್ಷದ ಅಧ್ಯಕ್ಷೆ ಅಥವಾ ಉಪಾಧ್ಯಕ್ಷರೇ ಪ್ರಧಾನಿಯಾಗಲಿದ್ದಾರೆ. ಈ ಮಧ್ಯೆ, ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಪ್ರಕಟಿಸುವ ಅಗತ್ಯ ಇಲ್ಲ ಎಂದು ತರೂರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, ನಮ್ಮ ಪಕ್ಷದ ಅಧ್ಯಕ್ಷರು, ಉಪಾಧ್ಯಕ್ಷರು ಯಾರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಪಕ್ಷ ಅಧಿಕಾರಕ್ಕೆ ಬಂದಲ್ಲಿ, ಆ ಇಬ್ಬರಲ್ಲಿ ಒಬ್ಬರು ಪ್ರಧಾನಿಯಾಗುತ್ತಾರೆ ಎಂದು ತರೂರ್ ನೇರವಾಗಿ ಯಾರ ಹೆಸರನ್ನು ಪ್ರಸ್ತಾಪಿಸಿದೆ ಹೇಳಿದರು.