ಮಾ.13ರಿಂದ ಪಿಯುಸಿ, ಏ.1ರಿಂದ ಎಸ್ಎಸ್ಎಲ್ಸಿ ಪರೀಕ್ಷೆ
ಮಾರ್ಚ್ 13ರಿಂದ 28ರವರೆಗೆ ದ್ವಿತೀಯ ಪಿಯುಸಿ ಹಾಗೂ ಏಪ್ರಿಲ್ 1ರಿಂದ 10ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ..
ಬೆಂಗಳೂರು: ಮಾರ್ಚ್ 13ರಿಂದ 28ರವರೆಗೆ ದ್ವಿತೀಯ ಪಿಯುಸಿ ಹಾಗೂ ಏಪ್ರಿಲ್ 1ರಿಂದ 10ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದ್ವಿತೀಯ ಪಿಯು ಪರೀಕ್ಷೆಗಾಗಿ 951 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 6.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಇನ್ನು ಏ.1ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗಾಗಿ 3,003 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಒಟ್ಟು 8.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಹೇಳಿದರು.