ಮೇ ತಿಂಗಳಲ್ಲಿ ಸಿಇಟಿ, ಕಾಮೆಡ್-ಕೆ ಪರೀಕ್ಷೆ
ಸುಪ್ರೀಂಕೋರ್ಟ್‌ನ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ ತಿಂಗಳಲ್ಲಿ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ...
ಬೆಂಗಳೂರು: ಸುಪ್ರೀಂಕೋರ್ಟ್‌ನ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ ತಿಂಗಳಲ್ಲಿ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್‌ನ ಸೂಚನೆ ಹಿನ್ನೆಲೆಯಲ್ಲಿ ಕಾಮೆಡ್-ಕೆಯೊಂದಿಗೆ ಸಭೆ ನಡೆಸಿ, ಮೇ 1,2ರಂದು ಸಿಇಟಿ (ಇಂಜಿನಿಯರಿಂಗ್, ವೈದ್ಯಕೀಯ) ಹಾಗೂ ಮೇ 12ರಂದು ಕಾಮೆಡ್-ಕೆ ಪರೀಕ್ಷೆ ನಡೆಸಲಾಗುವುದು ಎಂದು ರವಿ ತಿಳಿಸಿದ್ದಾರೆ. ಮೇ ತಿಂಗಳ ಕೊನೆ ವಾರದಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವದು ಹಾಗೂ ಜೂನ್ 22ರೊಳಗೆ ಕಳೆದ ವರ್ಷದಂತೆ ಪ್ರವೇಶ ಪ್ರಕ್ರಿಯೆ ನಡೆಸಲಾಗುವುದು ಎಂದು ರವಿ ಹೇಳಿದ್ದಾರೆ.
ರಾಜ್ಯದಲ್ಲಿ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ ಸಂಬಂಧ ಇದ್ದ ಗೊಂದಲದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಏಪ್ರೀಲ್ ಅಥವಾ ಮೇ ತಿಂಗಳಲ್ಲಿ ಸಿಇಟಿ ಹಾಗೂ ಕಾಮೆಡ್-ಕೆ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಫೆ.18ರಂದು ಸೂಚಿಸಿತ್ತು.