ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕುರಿಯನ್ ವಿರುದ್ಧ ಕೇಸು ದಾಖಲಿಸುವ ಬಗ್ಗೆ ನಿರ್ಧರಿಸಿಲ್ಲ: ಕೇರಳ

Mainashree
Updated On : 26 Feb 2013, 4:53 am

ಕೊಚ್ಚಿ: ಸೂರ್ಯನೆಲ್ಲಿ ಸಾಮೂಹಿಕ ಅತ್ಯಚಾರಕ್ಕಿಡಾದ ಯುವತಿ ಸಲ್ಲಿಸಿರುವ ದೂರಿನ ಆಧಾರದ ಮೇಲೆ ರಾಜ್ಯಸಭಾ ಉಪಸಭಾಪತಿ ಪಿ.ಜೆ ಕುರಿಯನ್ ವಿರುದ್ಧ ಕೇಸ್ ದಾಖಲಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇರಳ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ಹೇಳಿದೆ.

ಕುರಿಯನ್ ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಯುವತಿ ನೀಡಿದ್ದ ದೂರನ್ನು ಪೊಲೀಸರು ಸ್ವೀಕರಿಸಿದ್ದಾರೆ. ಆದರೆ ಪ್ರಕರಣ ದಾಖಲಿಸಿಕೊಂಡಿಲ್ಲ. ಇದಕ್ಕೆ ಸಂಬಂಧ ಪಟ್ಟ ದಾಖಲೆಗಳನ್ನು ಯುವತಿಯ ವಕೀಲರು ಹೈಕೋರ್ಟ್‌ಗೆ ಸಲ್ಲಿಸಿದ್ದರು.

ಅತ್ಯಾಚಾರಕ್ಕೊಳಗಾದ ಯುವತಿ ಕಳೆದ ಶುಕ್ರವಾರ ರಾಜ್ಯಸಭೆ ಉಪಸಭಾಪತಿ ಪಿ.ಜೆ ಕುರಿಯನ್ ಅವರ ವಿರುದ್ಧ ಚಿಂಗವಾನಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಇನ್ನಿತರ ಆರೋಪಿಗಳಾದ ಧರ್ಮರಾಜನ್, ಉನ್ನಿಕೃಷ್ಣನ್ ಮತ್ತು ಜಮಾಲ್ ವಿರುದ್ಧವೂ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಕೇಸು ದಾಖಲಿಸಲು ನಿರಾಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಯುವತಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್ ಕೇರಳ ಸರ್ಕಾರಕ್ಕೆ ಮುಂದಿನ ಕ್ರಮಗಳ ಬಗ್ಗೆ ತಿಳಿಸುವಂತೆ ಸೂಚಿಸಿತ್ತು. ಇದಕ್ಕೆ ಪ್ರತಿಕ್ರಯಿಸಿರುವ ಸರ್ಕಾರ ಕೇಸು ದಾಖಲಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement