ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ್ರಚೋದನಕಾರಿ ಹೇಳಿಕೆ: ಸಂಸದ ವರುಣ್ ಗಾಂಧಿ ನಿರ್ದೋಷಿ

ಲೋಕಸಭಾ ಚುನಾವಣಾ ವೇಳೆ ವಿವಾದಕ್ಕೀಡಾಗಿದ್ದ ಬಿಜೆಪಿ ಸಂಸದ ವರುಣ್ ಗಾಂಧಿ ಅವರನ್ನು ನ್ಯಾಯಾಲಯ ನಿರ್ದೋಷಿ ಎಂದು ಪರಿಗಣಿಸಿದೆ.

Srinivasa Murthy VN
Updated On : 27 Feb 2013, 5:53 am

ನವದೆಹಲಿ: ಲೋಕಸಭಾ ಚುನಾವಣಾ ವೇಳೆ ವಿವಾದಕ್ಕೀಡಾಗಿದ್ದ ಬಿಜೆಪಿ ಸಂಸದ ವರುಣ್ ಗಾಂಧಿ ಅವರನ್ನು ನ್ಯಾಯಾಲಯ ನಿರ್ದೋಷಿ ಎಂದು ಪರಿಗಣಿಸಿದೆ.

ಸಂಸದ ವರುಣ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದ 2 ದೂರುಗಳ ಸುದೀರ್ಘ ವಿಚಾರಣೆ ನಡೆಸಿದ ಪಿಲ್ಬಿಟ್ ನ್ಯಾಯಾಲಯ ವರುಣ್‌ಗಾಂಧಿ ಅವರನ್ನು ದೋಷಮುಕ್ತಗೊಳಿಸಿದೆ.

2009ರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ 2 ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಎರಡೂ ದೂರುಗಳನ್ನು ಏಕಕಾಲದಲ್ಲಿ ವಿಚಾರಣೆ ನಡೆಸಿದ್ದ ಪಿಲ್ಬಿಟ್ ನ್ಯಾಯಾಲಯ, ಸತತ 4 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ವರುಣ್ ಗಾಂಧಿ ಅವರನ್ನು ನಿರ್ದೋಷಿ ಎಂದು ಪರಿಗಣಿಸಿ ಪ್ರಕರಣದಿಂದ ಅವರನ್ನು ಖುಲಾಸೆಗೊಳಿಸಿದೆ.

ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿ ಸಂಸದ ಒಂದು ಕೋಮಿನ ಜನತೆಯನ್ನು ಮತ್ತೊಂದು ಕೋಮಿನ ವಿರುದ್ಧ ಎತ್ತಿಕಟ್ಟುವಂತಹ ಮಾತಗಳನ್ನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ 2 ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ದೂರುಗಳ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಅವರನ್ನು ನಿರ್ದೋಷಿ ಎಂದು ಪರಗಣಿಸಿ ಪ್ರಕರಣವನ್ನು ವಜಾಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement