ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಫೋರ್ಜರಿ ಕೇಸ್: ಬಿಎಸ್‌ವೈ, ಧನಂಜಯ್ ವಿರುದ್ಧ ತನಿಖೆಗೆ ಆದೇಶ

ವಂಜನೆ ಹಾಗೂ ಫೋರ್ಜರಿ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ..

Lingaraj Badiger
Updated On : 27 Feb 2013, 3:52 am

ಬೆಂಗಳೂರು: ವಂಜನೆ ಹಾಗೂ ಫೋರ್ಜರಿ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೆಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿ.ಧನಂಜಯ್ ಕುಮಾರ್ ಅವರ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಬುಧವಾರ ತನಿಖೆಗೆ ಆದೇಶಿಸಿದೆ.

ರಾಜಿನಾಮೆ ಪತ್ರದಲ್ಲಿ ತಮ್ಮ ಸಹಿಯನ್ನು ಫೋರ್ಜರಿ ಮಾಡಲಾಗಿದೆ ಎಂದು ಆರೋಪಿಸಿ ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಅವರು ಖಾಸಗಿ ದೂರು ದಾಖಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ ಕೋರ್ಟ್, ಪ್ರಕರಣದ ಕುರಿತು ತನಿಖೆ ನಡೆಸುವಂತೆ ಸಂಜಯನಗರ ಪೊಲೀಸರಿಗೆ ಆದೇಶಿಸಿದೆ. ಅಲ್ಲದೆ ಮಾರ್ಚ್ 27ರೊಳಗೆ ವರದಿ ನೀಡುವಂತೆಯೂ ಪೊಲೀಸರಿಗೆ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement