ಮೂವರು ಸಚಿವರನ್ನು ಸಂಪುಟದಿಂದ ಕೈಬಿಟ್ಟ ಜಯಲಲಿತಾ
ಚೆನ್ನೈ: ತಮಿಳನಾಡು ಮುಖ್ಯಮಂತ್ರಿ ಜಯಲಲಿತಾ ಅವರು ತಮ್ಮ ಸಚಿವ ಸಂಪುಟದಿಂದ ಮೂವರು ಸಚಿವರನ್ನು ಬುಧವಾರ ವಜಾಗೊಳಿಸಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ಪ್ರಭಾವಿ ರಾಜಕಾರಣಿಯಾಗಿರುವ ಪ್ರವಾಸೋದ್ಯಮ ಸಚಿವೆ ಗೋಕುಲ್ ಇಂದಿರಾ, ಪ್ರಾಥಮಿಕ ಶಿಕ್ಷಣ, ಕ್ರೀಡಾ ಮತ್ತು ಯುವಜನ ಕಲ್ಯಾಣ ಸಚಿವ ಎನ್‌ಆರ್ ಶಿವಪತಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ವಿಎಸ್ ವಿಜಯ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.
ಮೂವರು ಸಚಿವರನ್ನು ಕೈ ಬಿಟ್ಟ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಇತ್ತೀಚೆಗೆ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆದಿದ್ದು, ಕಾರ್ಯಕರ್ತರ ಓಲೈಕೆಗಾಗಿ ಸಿಎಂ ಜಯಲಲಿತಾ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.