'ಹೈ'ಸ್ಫೋಟ: ಎನ್ಐಎ ವಶಕ್ಕೆ ಶಂಕಿತ ಉಗ್ರರು
ನವದೆಹಲಿ: ಹೈದ್ರಾಬಾದ್ ಅವಳಿ ಸ್ಫೋಟಕ್ಕೆ ಸಂಬಂಧಿಸಿದಂತೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಶಂಕಿತ ಉಗ್ರರನ್ನು 5 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ವಶಕ್ಕೆ ನೀಡುವಂತೆ ದೆಹಲಿ ಕೋರ್ಟ್ ಆದೇಶಿಸಿದೆ.
ಇಂಡಿಯನ್ ಮುಜಾಹಿದೀನ್ ಸಂಘಟನೆಯ ಶಂಕಿತ ಉಗ್ರರನ್ನು ತಮ್ಮ ವಶಕ್ಕೆ ನೀಡುವಂತೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ದೆಹಲಿ ಕೋರ್ಟ್ನಲ್ಲಿ ಮಂಗಳವಾರ ಅರ್ಜಿ ಸಲ್ಲಿಸಿತ್ತು.
ಫೆಬ್ರವರಿ 21ರಂದು ಹೈದ್ರಾಬಾದ್ನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಾಂಬ್ ಸ್ಫೋಟವಾಗಿ 16 ಜನರನ್ನು ಬಲಿತೆಗದುಕೊಂಡಿತ್ತು. ಈ ಸಂಬಂಧ ತನಿಖೆ ನಡೆಸಲು ಎನ್ಐಎ ರಚಿಸಲಾಯಿತು.
ತನಿಖೆ ಚುರುಕುಗೊಳಿಸಿರುವ ಎನ್ಐಎ, ಆಗಸ್ಟ್ 2012ರ ಪೂಣೆ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿರಿಸಲಾಗಿದೆ. ಇವರನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿತ್ತು. ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ 5 ದಿನಗಳ ಕಾಲ ಐಎಂ ಸಂಘಟನೆಯ ಕಾರ್ಯಕರ್ತರನ್ನು ಎನ್ಐಎ ವಶಕ್ಕೆ ನೀಡಿದೆ.
ಜಿಲ್ಲಾ ನ್ಯಾಯಾಧೀಶ ಐ.ಎಸ್ ಮೆಹ್ತಾ ಅವರು ಈ ಆದೇಶ ಹೊರಡಿಸಿದ್ದಾರೆ.