ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ, ಎಲ್ಲರ ಚಿತ್ತ ಮೋದಿಯತ್ತ

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಮೂರು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ..

Lingaraj Badiger
Updated On : 1 Mar 2013, 1:01 am

ನವದೆಹಲಿ: ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಮೂರು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಆರಂಭವಾಗಲಿದೆ.

ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಇಂದು ಮಧ್ಯಾಹ್ನ 3.45ಕ್ಕೆ ರಾಷ್ಟ್ರೀಯ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಶನಿವಾರ ಮತ್ತು ಭಾನುವಾರ ಪಕ್ಷದ ರಾಷ್ಟ್ರೀಯ ಪರಿಷತ್ ಸಭೆ ನಡೆಯಲಿದೆ.

ಈ ಕಾರ್ಯಕಾರಣಿಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಎಲ್ಲರ ಗಮನ ಸೇಳೆದಿದ್ದು, ಮೋದಿ 2014ರ ಚುನಾವಣೆಯ ನೇತೃತ್ವ ವಹಿಸಿಕೊಳ್ಳಲಿದ್ದಾರೆಯೇ ಎಂಬುದರ ಬಗ್ಗೆ ಕುತೂಹಲ ಮೂಡಿದೆ.

ಗುಜರಾತ್‌ನಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದ ನಂತರ ಮೋದಿ ಅವರು ಮೊದಲ ಬಾರಿಗೆ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿಯ ಮುಖ್ಯಸ್ಥರನ್ನಾಗಿ ಮೋದಿ ಅವರನ್ನು ಪಕ್ಷ ನೇಮಕ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅದನ್ನು ಈ ಕಾರ್ಯಕಾರಣಿಯಲ್ಲೇ ಪ್ರಕಟಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement