ಸರ್ಕಾರಿ ಶಾಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ
ನವೆದೆಹಲಿ: ಅಪರಚಿತ ವ್ಯಕ್ತಿಯೊಬ್ಬ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ದೆಹಲಿಯ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ನಡೆದಿದೆ.
ದೆಹಲಿಯ ಈಶಾನ್ಯ ಭಾಗದಲ್ಲಿರುವ ಮಾಂಗೋಲ್ಪುರಿ ಎಂಬ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಿದ್ದು, ಶಾಲೆ ಸಿಬ್ಬಂದಿ ಮತ್ತು ಶಿಕ್ಷಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.