ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಫೆ. 8ರಂದು ರಾಜ್ಯ ಬಜೆಟ್: ಸುರೇಶ್‌ಕುಮಾರ್

Srinivasa Murthy VN
Updated On : 21 Jan 2013, 5:24 am

ಬೆಂಗಳೂರು: ಫೆಬ್ರವರಿ 4ರಂದು ಬಜೆಟ್ ಅಧಿವೇಶನ ಆರಂಭವಾಗಲಿದ್ದು, 8ರಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್‌ಕುಮಾರ್ ಅವರು, ಬಜೆಟ್ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆದರು. ಮುಂದಿನ ತಿಂಗಳ 4ರಂದು ಜಂಟಿ ಅಧಿವೇಶನವನ್ನು ಕರೆಯಲಾಗಿದ್ದು, ಬಜೆಟ್ ಮೇಲೆ ಚರ್ಚೆ ನಡೆಸಲಾಗುತ್ತದೆ. ನಂತರ ಫೆಬ್ರವರಿ 8ರಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಈ ಭಾರಿಯ ಬಜೆಟ್ ಜನಪರವಾಗಿರಲಿದ್ದು, ರೈತರನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ರಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದೇ ಸಂದರ್ಭದಲ್ಲಿ ಭತ್ತಕ್ಕೆ ಬೆಂಬಲ ಬೆಲೆ ಘೋಷಿಸುವ ಕುರಿತು ಮಾತನಾಡಿದ ಅವರು,  ಈ ಬಗ್ಗೆ ಮುಖ್ಯಮಂತ್ರಿ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದರು. ಅಲ್ಲದೆ ರಾಜ್ಯದ 4 ಲಕ್ಷ ಕುಟುಂಬಗಳಿಗೆ ಕುಷ್ಕ ಭೂಮಿಯನ್ನು ನೀಡುವುದಾಗಿ ಸುರೇಶ್ ಕುಮಾರ್ ಘೋಷಣೆ ಮಾಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿಯ ಅರಣ್ಯದಲ್ಲಿನ ಒಣಭೂಮಿಯನ್ನು ನೀಡುವುದಾಗಿ ಹೇಳಿದರು.

ಅಲ್ಲದೆ 8 ವಾಜಪೇಯಿ ಮಾದರಿ ಶಾಲೆಗಳನ್ನು ಸ್ಥಾಪಿಸುವುದಾಗಿ ಸುರೇಶ್ ಕುಮಾರ್ ಘೋಷಣೆ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement