ಕಾಂಗ್ರೆಸ್ ಉನ್ನತ ಮಟ್ಟದ ಸಭೆ ಕರೆದ ರಾಹುಲ್
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ರಾಹುಲ್ ಗಾಂಧಿ ಬುಧವಾರ ಪಕ್ಷದ ಉನ್ನತ ಮಟ್ಟದ...
ನವದೆಹಲಿ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ರಾಹುಲ್ ಗಾಂಧಿ ಬುಧವಾರ ಪಕ್ಷದ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಇಂದು ಸಂಜೆ 5 ಗಂಟೆಗೆ ಕಾಂಗ್ರೆಸ್ ಪ್ರಧಾನ ಕಾರ್ಯಾಲಯದಲ್ಲಿ ಸಭೆ ನಡೆಯಲಿದ್ದು, ಎಲ್ಲ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಾಗಲಿದ್ದಾರೆ.
ಕಾಂಗ್ರೆಸ್ ಪಕ್ಷದ ಎಲ್ಲ ಶಾಖೆಗಳ ಅಧ್ಯಕ್ಷರನ್ನು ಈ ಸಭೆಗೆ ಆಹ್ವಾನಿಸಲಾಗಿದ್ದು, ಈ ಸಭೆಯಲ್ಲಿ 2014ರ ಲೋಕಸಭಾ ಚುನಾವಣೆಗೆ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ (ಎಐಸಿಸಿ) ಯಾವ ರೀತಿ ತಯಾರಿ ಮಾಡಬೇಕು ಎಂಬುದರ ಬಗ್ಗೆ ಕಾರ್ಯತಂತ್ರ ರೂಪಿಸಲಾಗುವುದು.
ಉಪಾಧ್ಯಕ್ಷ ಸ್ಥಾನಕ್ಕೇರಿದ ನಂತರ ರಾಹುಲ್ ಅಧ್ಯಕ್ಷತೆಯಲ್ಲಿ ನಡೆಯುವ ಮೊದಲ ಸಭೆಯಾಗಿದೆ ಇದು.