ಬಹುಮತ ಸಾಬೀತಿಗೆ ರಾಜ್ಯಪಾಲರ ಸೂಚನೆ?
ವಿಶ್ವಾಸಮತಯಾಚಿಸಬೇಕಾದ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಸಿಲುಕಿದ್ದು, ಬಜೆಟ್ ಮಂಡಿಸುವ ಮುನ್ನ ....
ಬೆಂಗಳೂರು: ವಿಶ್ವಾಸಮತಯಾಚಿಸಬೇಕಾದ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಸಿಲುಕಿದ್ದು, ಬಜೆಟ್ ಮಂಡಿಸುವ ಮುನ್ನ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಲಿದ್ದಾರೆ ಎಂದು ಬುಧವಾರ ರಾಜಭವನದ ಮೂಲಗಳು ತಿಳಿಸಿವೆ.
ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಶಾಸಕರ ನಿಯೋಗದ ಮನವಿಗೆ ಸ್ಪಂದಿಸಿರುವ ರಾಜ್ಯಪಾಲ ಎಚ್.ಆರ್.ಭಾರದ್ವಜ್ ಅವರು, ಫೆಬ್ರುವರಿ ನಾಲ್ಕರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ವಿಶ್ವಾಸಮತ ಸಾಬೀತಿಗೆ ಸೂಚನೆ ನೀಡುವ ಸಾಧ್ಯತೆ ಇದೆ.
ಸ್ಪೀಕರ್ ಅವರು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಇಬ್ಬರು ಸಚಿವರು ಸೇರಿದಂತೆ 13 ಶಾಸಕರು ನೇರವಾಗಿ ರಾಜಭವನಕ್ಕೆ ತೆರಳಿ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ವೇಳೆ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಬಹುಮತ ಸಾಬೀತಿಗೆ ಸೂಚಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.