ರಾಜ್ಯಪಾಲರ ಭೇಟಿಗೆ ಬಿಎಸ್ವೈ ಬೆಂಬಲಿಗ ಶಾಸಕರ ನಿರ್ಧಾರ
ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ನಡೆದ ಹೈಡ್ರಾಮದ ಬಳಿಕ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ...
ಬೆಂಗಳೂರು: ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ನಡೆದ ಹೈಡ್ರಾಮದ ಬಳಿಕ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿರುವ ಕೆಜೆಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲಿತ 13 ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಸ್ಪೀಕರ್ ಕಚೇರಿಯಲ್ಲಿ ತಮ್ಮ ರಾಜಿನಾಮೆ ಪತ್ರಗಳನ್ನು ಸ್ವೀಕರಿಸದಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಿದ್ದಾರೆ.
ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಬ್ಬರು ಸಚಿವರು ಸೇರಿದಂತೆ 13 ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.