ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯಪಾಲರಿಗೆ ರಾಜಿನಾಮೆ ಸಲ್ಲಿಸಿದ ಬಿಎಸ್‌ವೈ ಟೀಂ

ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಿಗ 13 ಶಾಸಕರು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ...

Lingaraj Badiger
Updated On : 23 Jan 2013, 3:34 am

ಬೆಂಗಳೂರು: ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಿಗ 13 ಶಾಸಕರು ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿ, ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಸ್ಪೀಕರ್ ಕಚೇರಿಯಲ್ಲಿ ತಮ್ಮ ರಾಜಿನಾಮೆ ಪತ್ರಗಳನ್ನು ಸ್ವೀಕರಿಸದಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭೇಟಿ ಮಾಡಿ, ರಾಜಿನಾಮೆ ಪತ್ರ ಸಲ್ಲಿಸಿದರು. ಇದೇ ವೇಳೆ ವಿದೇಶ ಪ್ರವಾಸದಲ್ಲಿರುವ ಸ್ಪೀಕರ್ ಬೋಪಯ್ಯ ಅವರನ್ನು ಕೂಡಲೇ ವಾಪಸ್ ಕರೆಯಿಸುವಂತೆ ಮನವಿ ಮಾಡಿದರು.

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಎಂ ಉದಾಸಿ ಅವರು, ರಾಜ್ಯಪಾಲರಿಗೆ ನಮ್ಮ ರಾಜಿನಾಮೆ ಪತ್ರಗಳನ್ನು ಸಲ್ಲಿಸಿದ್ದೇವೆ ಮತ್ತು ರಾಜಿನಾಮೆ ಅಂಗೀಕರಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement