ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಜಗನ್ ಜಾಮೀನು ವಜಾ
ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ್ ರೆಡ್ಡಿ ಅವರ ಜಾಮೀನು...
ಹೈದರಾಬಾದ್: ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ಮೋಹನ್ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಈ ಮುಂಚೆ ಜಗನ್ ಅವರು ಸಲ್ಲಿಸಿದ್ದ ಮತ್ತೊಂದು ಜಾಮೀನು ಅರ್ಜಿಯನ್ನು ಡಿಸೆಂಬರ್ 24ರಂದು ಆಂಧ್ರ ಹೈಕೋರ್ಟ್ ವಜಾಗೊಳಿಸಿತ್ತು.
ಕಳೆದ ವರ್ಷ ನವೆಂಬರ್ 28ರಂದು ಸಿಬಿಐ ವಿಶೇಷ ಕೋರ್ಟ್ ಜಗನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಜಗನ್ ಅವರು ಹೈಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಜಾಮೀನು ಅರ್ಜಿ ಸಲ್ಲಿಸಿದ್ದರು.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಕಳೆದ ಮೇ 27ರಂದು ಜಗನ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದರು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಸದ್ಯ ಚಂಚಲಗುಡ ಜೈಲಿನಲ್ಲಿದ್ದಾರೆ.