ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಪತ್ತೆ ವರದಿ ನೋವುಂಟು ಮಾಡಿದೆ: ಸ್ಪೀಕರ್ ಬೋಪಯ್ಯ

ನಾನು ಕಾಣೆಯಾಗಿದ್ದೇನೆ ಎಂಬ ಮಾಧ್ಯಮಗಳ ವರದಿಯಿಂದ ನನಗೆ ನೋವುಂಟಾಗಿದೆ ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ...

Lingaraj Badiger
Updated On : 24 Jan 2013, 4:29 am

ಬೆಂಗಳೂರು: ನಾನು ಕಾಣೆಯಾಗಿದ್ದೇನೆ ಎಂಬ ಮಾಧ್ಯಮಗಳ ವರದಿಯಿಂದ ನನಗೆ ನೋವುಂಟಾಗಿದೆ ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಗುರುವಾರ ಹೇಳಿದ್ದಾರೆ.

ಸ್ಪೀಕರ್ ನಾಪತ್ತೆಯಾಗಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬೋಪಯ್ಯ ಅವರು ಇಂದು ತಮ್ಮ ಕಚೇರಿಯ ಮೂಲಕ ಪತ್ರಿಕಾ ಪ್ರಕಟಣೆ ನೀಡಿದ್ದು, ಖಾಸಗಿ ಕಾರ್ಯಕ್ರಮದ ನಿಮಿತ್ತ ನಿನ್ನೆ ನಾನು ಊರಲ್ಲಿರಲಿಲ್ಲ ಎಂದು ತಿಳಿಸಿದ್ದಾರೆ.

ಶಾಸಕರ ರಾಜಿನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಲಿಖಿತ ಮಾಹಿತಿ ಇರಲಿಲ್ಲ. ನನ್ನ ಅನುಪಸ್ಥಿತಿ ತಿಳಿದೂ ಶಾಸಕರು ನಡೆದುಕೊಂಡ ರೀತಿ ಸರಿಯಲ್ಲ ಎಂದು ಬೋಪಯ್ಯ ಕಿಡಿ ಕಾರಿದ್ದಾರೆ.

ಇದೇ ವೇಳೆ, ತಾವು ಸ್ಪೀಕರ್ ಸ್ಥಾನಕ್ಕೆ ಚ್ಯುತಿ ಬರದಂತೆ ಕಾರ್ಯ ನಿರ್ವಹಿಸುವುದಾಗಿ ಹೇಳಿರುವ ಬೋಪಯ್ಯ, ಮೂರು ದಿನ ಸರ್ಕಾರಿ ರಜೆ ಇರುವುದರಿಂದ ತಾವು ಜನವರಿ 28ರಂದು ಕಚೇರಿಗೆ ಬರುವುದಾಗಿ ತಿಳಿಸಿದ್ದಾರೆ. ಆದರೆ ಅವರು ಸದ್ಯ ಎಲ್ಲಿದ್ದಾರೆ, ಯಾವ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಮಾತ್ರ ಯಾವುದೇ ಮಾಹಿತಿ ನೀಡಿಲ್ಲ.

ನಿನ್ನೆ ಇಬ್ಬರು ಸಚಿವರು ಸೇರಿದಂತೆ 13 ಶಾಸಕರು ರಾಜಿನಾಮೆ ಪತ್ರ ಹಿಡಿದು ಸ್ಪೀಕರ್ ಕಚೇರಿಗೆ ತೆರಳಿದ್ದರು. ಆದರೆ ರಾಜಿನಾಮೆ ಪಡೆಯಲು ಸ್ಪೀಕರ್ ಲಭ್ಯವಾಗದ ಹಿನ್ನೆಲೆಯಲ್ಲಿ ಅಕ್ರೋಶಗೊಂಡ ಶಾಸಕರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ, ಸ್ಪೀಕರ್ ವಿರುದ್ಧ ದೂರು ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement