ಶಾಸಕ ಕೃಷ್ಣಪ್ಪ, ಪುತ್ರ ಪ್ರಿಯಾಕೃಷ್ಣ ವಿರುದ್ಧ ಬಿ-ರಿಪೋರ್ಟ್
ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕರಾದ ಎಂ. ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಾಕೃಷ್ಣ ...
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕರಾದ ಎಂ. ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಾಕೃಷ್ಣ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಕೋರ್ಟ್‌ಗೆ ಗುರುವಾರ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.
ಅರ್ಜಿದಾರರು ಮಾಡಿರುವ ಆರೋಪಗಳಿಗೆ ಸೂಕ್ತ ದಾಖಲೆಗಳು ದೊರಕದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಪೊಲೀಸರ ಬಿ-ರಿಪೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ದೂರುದಾರ ಪ್ರಕಾಶ್ ಅವರು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ವಿಚಾರಣೆಯನ್ನು ಲೋಕಾಯುಕ್ತ ಕೋರ್ಟ್ ಏಪ್ರಿಲ್ 16ಕ್ಕೆ ಮುಂದೂಡಿದೆ.
ಕೃಷ್ಣಪ್ಪ ಹಾಗೂ ಪ್ರಿಯಾಕೃಷ್ಣ ಅವರು ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ಅಲ್ಲದೆ ಲೋಕಾಯುಕ್ತ ಹಾಗೂ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಪ್ರಕಾಶ್ ಎಂಬುವವರು ಲೋಕಾಯುಕ್ತ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.