ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶೀಘ್ರದಲ್ಲೇ ಮತ್ತಷ್ಟು ಶಾಸಕರು ರಾಜಿನಾಮೆ ನೀಡ್ತಾರೆ: ಬಿಎಸ್‌ವೈ

ಈಗ ಇಬ್ಬರು ಸಚಿವರು ಸೇರಿದಂತೆ 13 ಶಾಸಕರು ರಾಜಿನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಮತ್ತಷ್ಟು ಶಾಸಕರು ರಾಜಿನಾಮೆ ನೀಡಲಿದ್ದಾರೆ...

Lingaraj Badiger
Updated On : 24 Jan 2013, 4:28 am

ಬೆಂಗಳೂರು: ಈಗ ಇಬ್ಬರು ಸಚಿವರು ಸೇರಿದಂತೆ 13 ಶಾಸಕರು ರಾಜಿನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಮತ್ತಷ್ಟು ಶಾಸಕರು ರಾಜಿನಾಮೆ ನೀಡಲಿದ್ದಾರೆ ಎಂದು ಕೆಜೆಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಕೆಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗ ತಮ್ಮ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದವರೆಲ್ಲರೂ ಕೆಜೆಪಿ ಸೇರುತ್ತಾರೆ ಎಂದು ತಿಳಿಸಿದರು.

ಶೀಘ್ರದಲ್ಲೇ ಕೆಜೆಪಿಯ ಸಂಸದೀಯ ಮಂಡಳಿ ಘೋಷಣೆ ಮಾಡಿ, ಆ ಮೂಲಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.

ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಸರ್ಕಾರ ಸಂಪೂರ್ಣ ಬಹುಮತ ಕಳೆದುಕೊಂಡಿದೆ. ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಸರ್ಕಾರಕ್ಕೆ ಇಲ್ಲ. ಹೀಗಾಗಿ ತಕ್ಷಣವೇ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ, ವಿಧಾಸಭೆಯನ್ನು ವಿಸರ್ಜಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement