ವಿರೋಧದ ನಡುವೆಯೂ "ವಿಶ್ವರೂಪಂ" ಚಿತ್ರ ಪ್ರದರ್ಶನ
ತಿರುವನಂತಪುರಂ: ಖ್ಯಾತ ನಟ ಕಮಲ್ ಹಾಸನ್ ನಟಿಸಿರುವ ವಿಶ್ವರೂಪಂ ಚಿತ್ರ ಕೇರಳದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಮಿಳುನಾಡಿನಲ್ಲಿ ನಿಷೇಧ ಹೇರಲಾದ ವಿಶ್ವರೂಪಂ ಚಿತ್ರ ಪ್ರದರ್ಶನಕ್ಕೆ ದಕ್ಷಿಣ ರಾಜ್ಯಗಳಲ್ಲೂ ಮುಸ್ಲಿಂ ಸಂಘಟನೆಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ಇದರ ನಡುವೆಯೂ ಕೇರಳದ ಅನೇಕ ಚಿತ್ರಮಂದಿರಗಳಲ್ಲಿ ಶನಿವಾರ ವಿಶ್ವರೂಪಂ ಚಿತ್ರ ಪ್ರದರ್ಶನಗೊಂಡಿದೆ ಎಂದು ತಿಳಿದು ಬಂದಿದೆ.
ಚಿತ್ರಮಂದಿರಗಳ ಸುತ್ತಮುತ್ತಾ ಬಿಗಿಭದ್ರತೆ ಕಲ್ಪಿಸಲಾಗಿದ್ದು, ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮುಸ್ಲಿಂ ಸಂಘಟನೆಗಳು ಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತ ಪಡಿಸಿದ್ದು ಪ್ರತಿಭಟನೆಗಳು ನಡೆಸುತ್ತಿವೆ.