ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮತ್ತೆ ಭುಗಿಲೆದ್ದ ತೆಲಂಗಾಣ ವಿವಾದ: 'ಉಸ್ಮಾನಿಯಾ' ಆವರಣ ಉದ್ವಿಗ್ನ

ಆಂಧ್ರಪ್ರದೇಶದಲ್ಲಿ ಮತ್ತೆ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿವಾದ ಭುಗಿಲೆದಿದ್ದು, ಉಸ್ಮಾನಿಯಾ ವಿಶ್ವವಿದ್ಯಾಲಯದ ಆವರಣ ಉದ್ವಿಗ್ನಗೊಂಡಿದೆ.

Srinivasa Murthy VN
Updated On : 27 Jan 2013, 4:18 am

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮತ್ತೆ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿವಾದ ಭುಗಿಲೆದಿದ್ದು, ಉಸ್ಮಾನಿಯಾ ವಿಶ್ವವಿದ್ಯಾಲಯದ ಆವರಣ ಉದ್ವಿಗ್ನಗೊಂಡಿದೆ.

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಆಗ್ರಹಿಸಿ ಹೈದರಾಬಾದಿನಲ್ಲಿರುವ ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಂದು ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ. ಉಸ್ಮಾನಿಯಾ ವಿವಿಯ ಜಂಟಿ ಕಾರ್ಯಕಾರಿ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನಾ ರ್ಯಾಲಿ ಇದೀಗ ಘರ್ಷಣೆಗೆ ತಿರುಗಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪೊಲೀಸರತ್ತ ಕಲ್ಲು ತೂರಾಟ ನಡೆಸುತ್ತಿದ್ದಾರೆ.

ಆಂಧ್ರಪ್ರದೇಶ ರಾಜಭವನಕ್ಕೆ ಮುತ್ತಿಗೆ ಹಾಕಲು ವಿದ್ಯಾರ್ಥಿಗಳು ಯತ್ನಿಸಿದಾಗ ಪೊಲೀಸರು, ಅವರನ್ನು ತಡೆದರು. ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದಿ ವಿದ್ಯಾರ್ಥಿ ನಾಯಕರು ಪೊಲೀಸರ ವಿರುದ್ಧ ದಿಕ್ಕಾರ ಕೂಗಿದರು. ಅಲ್ಲದೆ ಅವರತ್ತ ಕಲ್ಲು ತೂರಾಟ ನಡೆಸಿದಾಗ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

ಈ ಹಿಂದೆ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಆಂಧ್ರಪ್ರದೇಶದ ಹಲವು ಶಾಸಕರು ರಾಜಿನಾಮೆ ಸಲ್ಲಿಸಿದ್ದರು. ಆಲ್ಲದೆ ಆಂಧ್ರಪ್ರದೇಶ ರಾಜ್ಯಪಾಲರಾದ ಇ ಎಸ್ ಎಲ್ ನರಸಿಂಹನ್ ಅವರು ತೆಲಂಗಾಣ ರಾಜ್ಯ ರಚನೆ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದರು. ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿರುವ ವಿದ್ಯಾರ್ಥಿಗಳು ರಾಜ್ಯಪಾಲರ ರಾಜಿನಾಮೆಗೆ ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement