ಮೃತ ವಿಜಯ್ ಕುಮಾರ್ ಕುಟುಂಬಕ್ಕೆ ಪರಿಹಾರ: ಆರ್ ಅಶೋಕ್
ಬೆಂಗಳೂರು: ಠಾಣೆಯಲ್ಲಿ ಸಹೋದ್ಯೋಗಿಯಿಂದಲೇ ಹತ್ಯೆಗೀಡಾದ ಪಿಎಸ್ಐ ವಿಜಯ್ ಕುಮಾರ್ ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುವುದೆಂದು ಗೃಹ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಘಟನೆಯ ಕುರಿತು ವಿಷಾಧ ವ್ಯಕ್ತಪಡಿಸಿದ ಅಶೋಕ್ ಕರ್ನಾಟಕ ಪೊಲೀಸ್ ಇತಿಹಾಸದಲ್ಲಿಯೇ ಇಂತಹ ಘಟನೆ ಇದೇ ಮೊದಲ ಬಾರಿಗೆ ಆಗಿದೆ. ಇಂತಹ ಘಟನೆಗಳು ಮರುಕಳಿಸಬಾರದು. ಘಟನೆ ಕುರಿತಂತೆ ತನಿಖೆ ನಡೆಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸರು ತಾಳ್ಮೆ ಕಳೆದುಕೊಳ್ಳಬಾರದು ಎಂದು ಅಭಿಪ್ರಾಯಪಟ್ಟರು.
ಈ ನಡುವೆ ಪಿಎಸ್ಐ ಅವರನ್ನು ಹತ್ಯೆಗೈದಿರುವ ಪೇದೆ ಆನಂದ್ ಕುಮಾರ್ ಅವರನ್ನು ದೊಡ್ಡಬಳ್ಳಾಪುರದ ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆಗೊಳಪಡಿಸಲಾಗಿದೆ.