ಅಪರಿಚಿತ ವ್ಯಕ್ತಿಗಳಿಂದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ನವದೆಹಲಿ: ಜಮಿಯಾ ನಗರದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು 17 ವರ್ಷದ ಹುಡಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಂಗಳವಾರ ವರದಿಯಾಗಿದೆ.
ಸೋಮವಾರ ಸಂಜೆ ಮನೆ ಕೆಲಸಕ್ಕೆ ಹೋಗಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಹುಡುಗಿಯನ್ನು ಕೊಠಡಿಗೆ ಎಳೆದು ಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಹುಡಿಗಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದು, ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಲ್ಲಿ ತಿಳಿದು ದೃಢಪಟ್ಟಿದೆ ಎಂದು ಹೇಳಿದ್ದಾರೆ.
ದುಷ್ಕರ್ಮಿಗಳು ಮದ್ಯಪಾನ ಮಾಡಿದ್ದರು ಎಂದು ಆಕೆ ಹೇಳಿಕೆ ನೀಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿದ್ದಾರೆ.