ಐಟಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಗಡ್ಕರಿ ವಿರುದ್ಧ ಕೇಸು
ಆದಾಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಬಿಜೆಪಿಯ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಪ್ರಕರಣ...
ನವದೆಹಲಿ: ಆದಾಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಬಿಜೆಪಿಯ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಪ್ರಕರಣ ದಾಖಲಿಸಿದೆ.
ಗಡ್ಕರಿಯ ಪುರ್ತಿ ಗ್ರೂಪ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆದಾಯ ಇಲಾಖೆ ಅಧಿಕಾರಿಗಳು ಪ್ರಸ್ತುತ ಕಂಪನಿಯ ಮೇಲೆ ದಾಳಿ ಮಾಡಿದ್ದರು.
ಆದಾಗ್ಯೂ, ತಮ್ಮ ಕಂಪನಿಯ ಮೇಲೆ ದಾಳಿ ಮಾಡಿದ ಐಟಿ ಇಲಾಖೆಯ ಮೇಲೆ ಕಿಡಿ ಕಾರಿದ ಗಡ್ಕರಿ, ಬಿಜೆಪಿ ಅಧಿಕಾರಕ್ಕೆ ಬರಲಿ. ಆವಾಗ ಐಟಿ ಅಧಿಕಾರಿಗಳು ಹೇಗೆ ತಪ್ಪಿಸಿಕೊಳ್ಳುತ್ತಾರೆ ಎಂದು ನೋಡುತ್ತೇನೆ ಎಂದು ಐಟಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದರು.
ತಮ್ಮ ರಾಜಕೀಯ ವ್ಯಕ್ತಿತ್ವವನ್ನು ಹಾಳು ಮಾಡುವುದಕ್ಕಾಗಿಯೇ ಐಟಿ ಇಲಾಖೆ ತಮ್ಮ ಕಂಪನಿಯ ಮೇಲೆ ದಾಳಿ ಮಾಡುತ್ತಿದೆ ಎಂದು ಗಡ್ಕರಿ ಆದಾಯ ಇಲಾಖೆಯ ಮೇಲೆ ಆರೋಪ ಹೊರಿಸಿದ್ದು, ತಮ್ಮ ಪಕ್ಷ ಅಧಿಕಾರಕ್ಕೇರಿದರೆ ಐಟಿ ಅಧಿಕಾರಿಗಳ ವಿರುದ್ಧ ಸೇಡು ತೀರಿಸುವುದಾಗಿ ಗುಡುಗಿದ್ದರು.
ಐಟಿ ಅಧಿಕಾರಿಗಳ ಮೇಲೆ ಬೆದರಿಕೆ ಹಾಕಿದ್ದನ್ನು ಖಂಡಿಸಿದ ಆಮ್ ಆದ್ಮಿ ಪಕ್ಷ ಇದೀಗ ಗಡ್ಕರಿ ವಿರುದ್ಧ ಕೇಸು ದಾಖಲಿಸಿದೆ.