ಬೆಂಗಳೂರು: ಬಿಜೆಪಿ ತೊರೆದು ಕರ್ನಾಟಕ ಜನತಾ ಪಕ್ಷ(ಕೆಜೆಪಿ)ದ ನೇತೃತ್ವ ವಹಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಜೆಪಿಯಿಂದಲೇ ಉಚ್ಚಾಟನೆ ಮಾಡಲಾಗಿದೆ.
ಯಡಿಯೂರಪ್ಪ ಅವರನ್ನು ಕೆಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರುವುದಾಗಿ ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನ ಅವರು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಪದ್ಮನಾಭ ಅವರು ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿದ್ದು, ಇನ್ನುಮುಂದೆ ತಾವೇ ಕೆಜೆಪಿ ಅಧ್ಯಕ್ಷರಾಗಿ ಮುಂದುವರೆಯುವುದಾಗಿ ಪದ್ಮನಾಭ ಅವರು ಪತ್ರದಲ್ಲಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಪದ್ಮನಾಭ ಅವರು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.