ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

2ಜಿ: ಪ್ರಧಾನಿ, ಮಾರನ್ ವಿರುದ್ಧ ಎಫ್ಐಆರ್, ಅರ್ಜಿ ವಜಾ

Mainashree
Updated On : 30 Jan 2013, 3:34 am

ನವದೆಹಲಿ: 2ಜಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮತ್ತು ಅವರ ಮಾಜಿ ಸಂಪುಟ ಸಹೋದ್ಯೋಗಿ ದಯಾನಿಧಿ ಮಾರನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

2ಜಿ ತರಾಂಗಂತರ ಹಂಚಿಕೆಯಲ್ಲಿ ನಡೆದಿರುವ ಹಗರಣದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ದಯಾನಿಧಿ ಮಾರನ್ ಭಾಗಿಯಾಗಿದ್ದಾರೆ, ಆದ್ದರಿಂದ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸಿಬಿಐಗೆ ಸೂಚಿಸಿಬೇಕು ಎಂದು ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ, ಪ್ರಕರಣದ ಸಂಬಂಧ ಪ್ರಧಾನಿ ವಿರುದ್ಧ ಆದೇಶ ಹೊರಡಿಸುವುದು ನ್ಯಾಯಾಂಗದ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದೆ. ಈ ಸಂಬಂಧ ವಿಷೇಶ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಎಂದು ಅರ್ಜಿದಾರರಿಗೆ ಸೂಚಿಸಿದೆ.

ಸಿಬಿಐ ಈಗಾಗಲೇ ದಯಾನಿಧಿ ಮಾರನ್ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ವಿಚಾರಣೆ ನಡೆಸುತ್ತಿದೆ ಹಾಗೂ ಅವರ ವಿರುದ್ಧ ದೂರ ದಾಖಲಿಸಿದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತೀಸ್ ಹಜಾರಿ ನ್ಯಾಯಾಲಯ ತಿಳಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement