ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ವಿಶ್ವರೂಪಂ'ಗೆ ತಡೆ: ಸುಪ್ರೀಂ ಮೆಟ್ಟಿಲೇರಲು ಕಮಲಹಾಸನ್ ನಿರ್ಧಾರ

ವಿವಾದಕ್ಕೀಡಾಗಿರುವ ವಿಶ್ವರೂಪಂ ಚಿತ್ರದ ಪ್ರದರ್ಶನಕ್ಕೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನಲೇಯಲ್ಲಿ ...

Mainashree
Updated On : 30 Jan 2013, 5:12 am

ಚೆನೈ: ವಿವಾದಕ್ಕೀಡಾಗಿರುವ ವಿಶ್ವರೂಪಂ ಚಿತ್ರದ ಪ್ರದರ್ಶನಕ್ಕೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನಲೇಯಲ್ಲಿ ನಟ ಕಮಲಹಾಸನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಬುಧವಾರ ನಿರ್ಧರಿಸಿದ್ದಾರೆ.

ವಿಶ್ವರೂಪಂ ಚಿತ್ರ ಬಿಡುಗಡೆಗೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗಿಯ ಪೀಠ ಮುಂದಿನ ಆದೇಶದವರೆಗೆ ಚಿತ್ರದ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿ, ವಿಚಾರಣೆಯನ್ನು ಫೆಬ್ರವರಿ 4ಕ್ಕೆ ಮುಂದೂಡಿದೆ.

ವಿಶ್ವರೂಪಂ ಚಿತ್ರ ಬಿಡುಗಡೆಗೆ ಅನುಮತಿ ನೀಡಿ ನಿನ್ನೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಆದರೆ ಇಂದು ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಇದೇ ವೇಳೆ ಸರ್ಕಾರದ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿರುವ ಕಮಲ್ ಹಾಸನ್ ಚಿತ್ರ ಬಿಡುಗಡೆಗೆ ಅನುಮತಿ ನೀಡದಿದ್ದರೆ ದೇಶ ಬಿಡಲು ನಾನು ಸಿದ್ಧ ಎಂದಿದ್ದಾರೆ. ಜಾತ್ಯತೀತ ಇರುವಂತಹ ದೇಶಕ್ಕೆ ನಾನು ತೆರಳಲು ಸಿದ್ಧ. ಚಿತ್ರ ನಿರ್ಮಾಣಕ್ಕಾಗಿ ನನ್ನಾ ಬಳಿ ಇದ್ದ ಆಸ್ತಿಯಲ್ಲಾ ಕಳೆದುಕೊಂಡಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement