'ವಿಶ್ವರೂಪಂ'ಗೆ ಮತ್ತೆ ತಡೆ
ಕಮಲಹಾಸನ್ ಅಭಿನಯದ 'ವಿಶ್ವರೂಪಂ' ಚಿತ್ರದ ಪ್ರದರ್ಶನಕ್ಕೆ ಮದ್ರಾಸ್ ಹೈಕೋರ್ಟ್ ಮತ್ತೆ ತಡೆಯಾಜ್ಞೆ ವಿಧಿಸಿದೆ...
ಚೆನ್ನೈ: ಕಮಲಹಾಸನ್ ಅಭಿನಯದ 'ವಿಶ್ವರೂಪಂ' ಚಿತ್ರದ ಪ್ರದರ್ಶನಕ್ಕೆ ಮದ್ರಾಸ್ ಹೈಕೋರ್ಟ್ ಮತ್ತೆ ತಡೆಯಾಜ್ಞೆ ವಿಧಿಸಿದೆ.
ವಿಶ್ವರೂಪಂ ಚಿತ್ರ ಬಿಡುಗಡೆಗೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ವಿಭಾಗಿಯ ಪೀಠ ಮುಂದಿನ ಆದೇಶದವರಗೆ ಚಿತ್ರದ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿ, ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದೆ.
ವಿಶ್ವರೂಪಂ ಚಿತ್ರ ಬಿಡುಗಡೆಗೆ ಅನುಮತಿ ನೀಡಿ ನಿನ್ನೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಆದರೆ ಇಂದು ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.