ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಮಲ್ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ: ಜಯಾ

ಕಮಲ್ ಹಾಸನ್ ಅವರ 'ವಿಶ್ವರೂಪಂ' ಚಿತ್ರ ಬಿಡುಗಡೆ ನಿಷೇಧವನ್ನು ಸಮರ್ಥಿಸಿಕೊಂಡಿರುವ ತಮಿಳನಾಡು ಮುಖ್ಯಮಂತ್ರಿ ಜೆ.ಜಯಲಲಿತಾ..

Mainashree
Updated On : 31 Jan 2013, 4:14 am

ಚೆನೈ: ಕಮಲ್ ಹಾಸನ್ ಅವರ 'ವಿಶ್ವರೂಪಂ' ಚಿತ್ರ ಬಿಡುಗಡೆ ನಿಷೇಧವನ್ನು ಸಮರ್ಥಿಸಿಕೊಂಡಿರುವ ತಮಿಳನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ಕಮಲ್ ಬಗ್ಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಎಂದು ಗುರುವಾರ ಹೇಳಿದ್ದಾರೆ.

ಚಿತ್ರ ಬಿಡುಗಡೆಗೆ ನಿಷೇಧವೇರಿದ್ದು, ಸರ್ಕಾರ ಮತ್ತು ಕಮಲ್ ಹಾಸನ್ ಅವರ ನಡುವೆ ಭಿನ್ನಭಿಪ್ರಾಯಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿರುವ ಜಯಲಲಿತಾ, ಚಿತ್ರ ಬಿಡುಗಡೆ ಸಂಬಂಧ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾನೂನಿನ ಪ್ರಕಾರ ಚಿತ್ರದ ಬಿಡುಗಡೆ ನಿಷೇಧವೇರಲಾಗಿದೆ. 24 ಮುಸ್ಲಿಂ ಸಂಘಟನೆಗಳು ಸರ್ಕಾರಕ್ಕೆ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಬಾರದು ಎಂದು ಮನವಿ ಪತ್ರ ಸಲ್ಲಿಸಿದ್ದರು. ಚಿತ್ರ ಬಿಡುಗಡೆಗೆ ಅನುಮತಿ ನೀಡಿದರೆ ಮುಸ್ಲಿಂ ಸಂಘಟನೆಗಳು ರಾಜ್ಯದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ತಿಳಿಸಿದ್ದವು. ಈ ಹಿನ್ನಲ್ಲೆಯಲ್ಲಿ ರಾಜ್ಯದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ನಮ್ಮ ಬಳಿ ಇರುವಂತಹ ಪೊಲೀಸ್ ಪಡೆಗಳಲ್ಲಿ 524 ಚಿತ್ರಮಂದಿರಗಳಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಚಿತ್ರ ಪ್ರದರ್ಶನಕ್ಕೆ ನಿಷೇಧವೇರಲಾಗಿದೆ ಎಂದು ಜಯಾ ತಿಳಿಸಿದ್ದಾರೆ.

ಕಮಲ್ ಹಾಸನ್ ಅವರ ಮೇಲೆ ತಮಗೆ ಯಾವುದೇ ಅಸೂಯೆ ಇಲ್ಲ. ಕಮಲ್ ಹಾಸನ್ ಅವರು ತಮ್ಮ ಪ್ರತಿಸ್ಫರ್ಧಿಯಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement