ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಚುನಾವಣೆಗೆ ಮುನ್ನ ಪ್ರಧಾನಿ ಅಭ್ಯರ್ಥಿ ಘೋಷಿಸಿ: ಉದ್ಧವ್ ಠಾಕ್ರೆ

Mainashree
Updated On : 31 Jan 2013, 5:44 am

ಮುಂಬೈ: 2014ರ ಲೋಕಸಭಾ ಚುನಾವಣೆ ನಡೆಯುವ ಮುನ್ನವೇ ಭಾರತೀಯ ಜನತಾ ಪಕ್ಷ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಹೇಳಿದ್ದಾರೆ.

ಅಂತಿಮಗಟ್ಟದಲ್ಲಿ ಆಗುವ ಗೊಂದಲಗಳನ್ನು ತಡೆಯುವ ಉದ್ದೇಶದಿಂದ ಬಿಜೆಪಿ ಚುನಾವಣೆಗೂ ಮುನ್ನವೇ ಪ್ರಧಾನಿ ಅಭ್ಯರ್ಥಿಯ ಹೆಸರು ಪ್ರಕಟಿಸಲಿ ಎಂದು ಅವರು ಸಲಹೆ ನೀಡಿದ್ದಾರೆ.

ಪ್ರಧಾನಿ ಸ್ಥಾನಕ್ಕೆ ಚುನಾವಣೆ ನಡೆಯುವ ಸಂದಂರ್ಭದಲ್ಲಿ ಅನೇಕ ಗೊಂದಲಗಳು ಎದುರಾಗುತ್ತವೆ. ಆದ್ದರಿಂದ ಈಗಲೇ ಎಲ್ಲರೂ ಒಟ್ಟಾಗಿ ಪ್ರಧಾನಿ ಅಭ್ಯರ್ಥಿ ಯಾರೆಂದು ನಿರ್ಧರಿಸುವುದು ಒಳ್ಳೆಯದು. ಪ್ರಧಾನಿ ಅಭ್ಯರ್ಥಿ ಆಯ್ಕೆ ಮಾಡುವುದರಿಂದ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಬಹುಮತ ಗಳಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರಪತಿ ಚುನಾವಣೆಯ ಅಂತಿಮಗಟ್ಟದವರೆಗೆ ಬಿಜೆಪಿ, ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ವಿಫಲವಾಗಿತ್ತು. ಆಗ ಬಿಜೆಪಿಯಲ್ಲಿ ಒಮ್ಮತವಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಸ್ಥಾನಕ್ಕೆ ಸುಷ್ಮಾಸ್ವರಾಜ್ ಸೂಕ್ತ ಎಂದು ಹೇಳವುದರ ಮೂಲಕ ಸುಷ್ಮಾ ಸ್ವರಾಜ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಬೇರೆ ನಾಯಕರನ್ನು ಹೆಸರಿಸಲು ಇಚ್ಚಿಸಿದರೆ ಆದರೆ ಬಗ್ಗೆ ಕುಳಿತು ಎಲ್ಲರೊಡನೆ ಚರ್ಚಿಸಲಿ. ರಾಷ್ಟ್ರಪತಿ ಚುನಾವಣೆಯಲ್ಲಿ ಮಾಡಿದಂತೆ ಈ ಬಾರಿ ಮಾಡಬೇಡಿ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement