ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ರಾಜಿನಾಮೆ
ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಅವರು ಗುರುವಾರ ರಾಜಿನಾಮೆ ನೀಡಿದ್ದಾರೆ.
ಆಯೋಗದ ವರದಿಗಳ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿರುವ ಮಂಜುಳಾ, ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ತಾವು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕರ್ನಾಟಕ ಜನತಾ ಪಕ್ಷ ಸೇರಲು ರಾಜಿನಾಮೆ ನೀಡಿಲ್ಲ ಎಂದು ಮಂಜುಳಾ ಸ್ಪಷ್ಟಪಡಿಸಿದ್ದಾರೆ.