ಲೋಕಪಾಲ್ ಮಸೂದೆ ಜಾರಿಗೆ ಕೇಂದ್ರ ಸಂಪುಟ ಅಸ್ತು
ನವದೆಹಲಿ: ಪರಿಷ್ಕೃತ ಲೋಕಪಾಲ್ ತಿದ್ದುಪಡಿ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ಸೂಚಿಸಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಪ್ರಧಾನಿ ಕಾರ್ಯಾಲಯದ ಸಚಿವ ನಾರಾಯಣಸ್ವಾಮಿ ಹೇಳಿದ್ದಾರೆ.
ರಾಜ್ಯ ಲೋಕಾಯುಕ್ತ ನೇಮಕಾತಿ ಸಂಬಂಧ ಲೋಕಪಾಲ್ ಮಸೂದೆಯಲ್ಲಿ ಕೆಲವು ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ.
ಕೇಂದ್ರ ವಿಚಕ್ಷಣಾ ಸಮಿತಿಯ ನಿರ್ದೇಶಕರ ನೇಮಕಾತಿ ಸೇರಿದಂತೆ ಮಸೂದೆಯ ಅನೇಕ ತಿದ್ದುಪಡಿಗೆ ರಾಜ್ಯ ಸಭಾ ಆಯ್ಕೆ ಸಮಿತಿ ಶಿಫಾರಸು ಮಾಡಿತ್ತು. ಆದರೆ ಸಮಿತಿ ಮಾಡಿದಂತ ಕೆಲ ತಿದ್ದುಪಡಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ.
16ರಲ್ಲಿ 14ನೇ ತಿದ್ದುಪಡಿ ಮಸೂದೆಗಳಿಗೆ ಒಪ್ಪಿಗೆ ನೀಡಲಾಗಿದ್ದು, ಮುಂದಿನ ಲೋಕಸಭಾ ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತದೆ ಎಂದು ಸಚಿವ ನಾರಾಯಣಸ್ವಾಮಿ ಹೇಳಿದ್ದಾರೆ.
ಲೋಕಪಾಲರ ಆಯ್ಕೆ ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಾಮೂರ್ತಿಗಳು, ಪ್ರಧಾನಿ ಮತ್ತು ಪ್ರತಿಪಕ್ಷದ ನಾಯಕರು ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.