'ಲೋಕಾ'ಗೆ ನ್ಯಾ.ವೈ.ಭಾಸ್ಕರ್ ರಾವ್ ಹೆಸರು ಶಿಫಾರಸು?
ಕಳೆದು ಒಂದುವರೆ ವರ್ಷದಿಂದ ಖಾಲಿ ಇರುವ ಲೋಕಾಯುಕ್ತ ಹುದ್ದೆಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್...
ಬೆಂಗಳೂರು: ಕಳೆದು ಒಂದುವರೆ ವರ್ಷದಿಂದ ಖಾಲಿ ಇರುವ ಲೋಕಾಯುಕ್ತ ಹುದ್ದೆಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನೂತನ ಲೋಕಾಯುಕ್ತ ಹುದ್ದೆಗೆ ಭಾಸ್ಕರ್ ರಾವ್ ಅವರ ಹೆಸರನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದ್ದು, ಈ ಬಗ್ಗೆ ವಿಧಾನಸಭೆ ಸ್ಪೀಕರ್, ಪ್ರತಿಪಕ್ಷದ ನಾಯಕರ ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಅಭಿಪ್ರಾಯ ಕೇಳಲಾಗಿದೆ. ಈ ಎಲ್ಲರ ಅಭಿಪ್ರಾಯ ಪಡೆದುಕೊಂಡ ಬಳಿಕ ಭಾಸ್ಕರ್ ರಾವ್ ಅವರನ್ನು ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡುವ ಸಾಧ್ಯತೆ ಇದೆ.
ಈ ಮಧ್ಯೆ, ಮೂಲತ ಆಂಧ್ರಪ್ರದೇಶದ ಕರೀಂ ನಗರದವರಾದ ಭಾಸ್ಕರ್ ರಾವ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವುದಕ್ಕೆ ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.
ಭಾಸ್ಕರ್ ರಾವ್ ಅವರು ಬಿಡಿಎ ನಿವೇಶನ ಪಡೆದುಕೊಂಡಿದ್ದಾರೆ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ ಅವರು ಆರೋಪಿಸಿದ್ದಾರೆ.