ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಕ್ರಮ ಅದಿರು ರಫ್ತು: ಡಿಕೆಶಿ ವಿರುದ್ಧ ತನಿಖೆಗೆ ಸುಪ್ರೀಂ ಆದೇಶ

ಅಕ್ರಮ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸಿಇಸಿ ತನಿಖೆಗೆ ಸುಪ್ರೀಂ ...

Lingaraj Badiger
Updated On : 1 Feb 2013, 4:44 am

ನವದೆಹಲಿ: ಅಕ್ರಮ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸಿಇಸಿ ತನಿಖೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ಡಿ.ಕೆ.ಶಿವಕುಮಾರ್ ನೇತೃತ್ವದ ಎಂಟು ಕಂಪನಿಗಳು ಸುಮಾರು 10 ಲಕ್ಷ 40ಸಾವಿರ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 8 ಕಂಪನಿಗಳ ವಿರುದ್ಧ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಇಸಿಗೆ ಆದೇಶಿಸಿದೆ.

2005ರಲ್ಲಿ ಧರ್ಮಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಡಿಕೆಶಿ ನೇತೃತ್ವದ ವಿಕ್ಟರಿ ಎಕ್ಸ್‌ಪೋರ್ಟ್ಸ್, ಸಾಯಿ ಟ್ರೇಡಿಂಗ್ ಕಂಪನಿ, ಸ್ಕಂದ ಎಂಟರ್‌ಪ್ರೈಸಸ್, ಇಂಡಿಯನ್ ರಾಕ್ಸ್, ಪ್ರದೀಪ್ ಎಕ್ಸ್‌ಪೋರ್ಟ್ಸ್, ವಲ್ಲೀಸ್, ನೆಟ್ ಪ್ರಾಜೆಕ್ಟ್ ಸಲ್ಯೂಷನ್ಸ್ ಹಾಗೂ ಸುವಿ ಗ್ರಾನೈಟ್ಸ್ ಕಂಪನಿಗಳು ಸರ್ಕಾರಿ ಸ್ವಾಮ್ಯದ ಮೈಸೂರು ಮಿನರಲ್ಸ್‌ನಿಂದ ಅತಿ ಕಡಿಮೆ ಬೆಲೆಗೆ ಅಕ್ರಮವಾಗಿ ಅದಿರು ಖರೀದಿಸಿ, ಅದನ್ನು ಹೆಚ್ಚು ಬೆಲೆಗೆ ರಫ್ತು ಮಾಡಲಾಗಿದೆ ಎಂದು ಹಿರೇಮಠ ತಮ್ಮ ಅರ್ಜಿಯಲ್ಲಿ ದೂರಿದ್ದರು.

ಮಾತಾ ಮಿನರಲ್ಸ್ ಹಾಗೂ ಪ್ರವೀಣಚಂದ್ರ ಮೈನಿಂಗ್ ಕಂಪನಿ ಸೇರಿದಂತೆ ಹಲವು ಕಂಪನಿಗಳಿಂದ ದೊಡ್ಡ ಪ್ರಮಾಣದ ಅಕ್ರಮ ಅದಿರು ರಫ್ತು ನಡೆದಿದೆ. ಇವುಗಳ ಗಣಿಗಾರಿಕೆಯನ್ನು ನಿಲ್ಲಸಬೇಕು ಎಂದು ಕೋರಿ ಹಿರೇಮಠ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement